ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಕ್ರಮ ಗಣಿಗಾರಿಕೆಯಲ್ಲಿ ರಾಮುಲು ಪಾತ್ರ: ಎಸ್.ಆರ್ ಹಿರೇಮಠ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ..

Lingaraj Badiger
Updated On : 9 Apr 2014, 5:07 am

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಬಿ.ಶ್ರೀರಾಮುಲು, ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯ ಬಲಗೈ ಬಂಟರಾಗಿದ್ದು, ಅವರು ಸಹ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರಮೇಠ ಅವರು ಬುಧವಾರ ಹೇಳಿದ್ದಾರೆ.

ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಅಕ್ರಮ ಗಣಿಗಾರಿಕೆಯಲ್ಲಿ ಶ್ರೀರಾಮುಲು ಪಾತ್ರ ಇದ್ದು, ಜನಾರ್ದನ ರೆಡ್ಡಿಯ ಎಲ್ಲ ಅಕ್ರಮಗಳಿಗೆ ರಾಮುಲು ಸಾಥ್ ನೀಡಿದ್ದಾರೆ ಮತ್ತು ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಇಂತಹ ಭ್ರಷ್ಟ ಅಭ್ಯರ್ಥಿಗಳನ್ನು ಜನ ತಿರಸ್ಕರಿಸಬೇಕು ಎಂದು ಬಳ್ಳಾರಿ ಮತದಾರರಲ್ಲಿ ಮನವಿ ಮಾಡಿದರು.

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಒಂದೇ, ಬಿಜೆಪಿಯಂತೆ ಕಾಂಗ್ರೆಸ್ ಸಹ ಕೋಮುವಾದಿ ಎಂದು ಹಿರೇಮಠ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement