ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಮಿತ್ ಶಾಗೆ ಬಂಧನ ಭೀತಿ: ಜಾಮೀನು ಕೋರಿ ಅರ್ಜಿ

Vishwanath S
Updated On : 9 Apr 2014, 3:24 am

ಅಹಮದಾಬಾದ್: ಮುಜಾಫರ್‌ನಗರ ಕೋಮುಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾ ಅವರು ಅಹಮದಾಬಾದ್ ಹೈ ಕೋರ್ಟ್‌ಗೆ ಬುಧವಾರ ನಿರೀಕ್ಷಣಾ ಜಾಮೀನು ಕೋರಿ  ಅರ್ಜಿ ಸಲ್ಲಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದ್ದು, ಬಂಧನ ಭೀತಿ ಎದುರಿಸುತ್ತಿರುವ ಅವರು ನಿರೀಕ್ಷಣಾ ಜಾಮೀನು ಕೋರಿ  ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿವಾದಾತ್ಮಕ ಹೇಳಿಕೆ ನೀಡಿದ್ದ ಭಾಷಣದ ಸಿಡಿಯನ್ನು ಕೋರ್ಟ್ ನೀಡುವಂತೆ ಆದೇಶಿಸಿ, ವಿಚಾರಣೆಯನ್ನು ನಾಳೆಗೆ ಮುಂದುಡಿದೆ.

ಬಿಜ್ನೋರ್ ದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮುಜಾಫರ್‌ನಗರ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಟ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದ ಅಮಿತ್ ಶಾ ಅವರು, ಮನುಷ್ಯ ಆಹಾರ ಮತ್ತು ನಿದ್ರೆ ಇಲ್ಲದಿದ್ದರೂ ಬದುಕ ಬಲ್ಲ. ಆದರೆ ತನಗಾದ ಅವಮಾನವನ್ನು ಸಹಿಸಿಕೊಂಡು ಆತ ಬದುಕಲಾರ. ಅವಮಾನಕ್ಕೆ ಪ್ರತೀಕಾರ ಪಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ್ದರು.

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 153(ಎ) ಮತ್ತು 125ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement