ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎನ್‌ಡಿಎ ಅಧಿಕಾರಕ್ಕೆ ಬಂದರೆ ಬಳ್ಳಾರಿ ಉಕ್ಕಿನನಗರಿ: ರಾಜ್‌ನಾಥ್ ಸಿಂಗ್

Vishwanath S
Updated On : 9 Apr 2014, 2:50 am

ಬಳ್ಳಾರಿ: ಎನ್‌ಡಿಎ ಅಧಿಕಾರಕ್ಕೆ ಬಂದರೆ ಬಳ್ಳಾರಿಯನ್ನು ಉಕ್ಕಿನನಗರಿಯನ್ನಾಗಿ ಮಾಡುತ್ತೇವೆ ಎಂದು ಬಿಜೆಪಿ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್‌ನಾಥ್ ಸಿಂಗ್, ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಬಳ್ಳಾರಿಯನ್ನು ಉಕ್ಕಿನನಗರಿಯನ್ನಾಗಿ ಮಾಡುತ್ತೇವೆ ಎಂದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಜ್‌ನಾಥ್ ಸಿಂಗ್, ಕಳೆದ 10 ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೆಸ್ ದೇಶವನ್ನು ಹಾಳು ಮಾಡಿದೆ. ಬಹುಕೋಟಿ ಭ್ರಷ್ಟಾಚಾರ ಹಗರಣಗಳು, ಬೆಲೆ ಏರಿಕೆ ನಿಯಂತ್ರಣ ಹಾಗೂ ಮಹಿಳೆಯರಿಗೆ ರಕ್ಷಣೆ ಕಲ್ಪಿಸುವಲ್ಲಿ ಕಾಂಗ್ರೆಸ್ ಸೋತ್ತಿದ್ದು, ಬೆಲೆ ಏರಿಕೆ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ಸದ್ಯ ದೇಶ ಸಂಕಟದ ಪರಿಸ್ಥಿತಿಯಲ್ಲಿದ್ದು, ಎನ್‌ಡಿಎನಿಂದ ಮಾತ್ರ ದೇಶವನ್ನು ಸಂಕಟ ಪರಿಸ್ಥಿತಿಯಿಂದ ಪಾರಾ ಮಾಡಲು ಸಾಧ್ಯ ಎಂದರು.

ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿಯಾದರೆ ಬೆಲೆ ಏರಿಕೆ ತಡೆಗೆ ಆಯೋಗವನ್ನು ರಚಿಸಲಾಗುವುದು. ಇಂದು ದೇಶದಲ್ಲಿ ಮೋದಿ ಅಲೆ ಎಂಬ ಮಹಾಪರಿವರ್ತನೆಯ ಗಾಳಿ ಇದ್ದು, ಜನರು ಬಿಜೆಪಿ ಕೈ ಹಿಡಿಯಲಿದ್ದಾರೆ. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement