ಗುಜರಾತ್ನಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸೋನಿಯಾ
ಗುಜರಾತ್ ಅಭಿವೃದ್ಧಿಯಾಗಿದೆ ಎಂದ ...
ಕೋಲಾರ: ಗುಜರಾತ್ ಅಭಿವೃದ್ಧಿಯಾಗಿದೆ ಎಂದು ಹೇಳಲಾಗುತ್ತಿದೆ ಮತ್ತು ಬಿಜೆಪಿ ನಾಯಕರು ಎಲ್ಲಾ ಕಡೆ ಗುಜರಾತ್ ಮಾದರಿಯನ್ನು ಪ್ರಸ್ತಾಪಿಸುತ್ತಿದ್ದಾರೆ. ಹಾಗಾದರೆ ದೇಶದಲ್ಲಿ ಇತರೆ ರಾಜ್ಯಗಳು ಅಭಿವೃದ್ಧಿಯಾಗಿಲ್ಲವೆ? ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.
ಇಂದು ಕೋಲಾರದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, ಗುಜರಾತ್ನಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಮೋದಿಯ ಹೆಸರು ಪ್ರಸ್ತಾಪಿಸದೆ, 'ವ್ಯಕ್ತಿಯ ನಿಜ ಬಣ್ಣ ಮರೆಮಾಚುವ ಉದ್ದೇಶದಿಂದ ದೇಶಾದ್ಯಂತ ಅವರ ಪೊಸ್ಟರ್ಗಳನ್ನು ಹಾಕಲಾಗಿದೆ' ಮುಖವಾಡ ಕಳಚಿದರೆ ಅವರ ಬಣ್ಣ ಬಯಲಾಗುತ್ತದೆ ಎಂದು ಸೋನಿಯಾ ಹೇಳಿದರು.
ಇನ್ನು ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ರಾಮಮಂದಿರ ಹೆಸರಿನಲ್ಲಿ ಹಿಂದೂಗಳ ಭಾವನೆಗಳನ್ನು ಕೆರಳಿಸುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಭಾಗವಹಿಸಿದ್ದರು.