ಪಾಕ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ; 23 ಸಾವು
ಇಸ್ಲಾಮಾಬಾದ್ನ ಜನ ನಿಬಿಡ ಮಾರುಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಬಾಂಬ್ ಸ್ಫೋಟ ಸಂಭವಿಸಿದ್ದು 23 ಮಂದಿ ಸಾವಿಗೀಡಾಗಿದ್ದಾರೆ...
ಇಸ್ಲಾಮಾಬಾದ್: ಇಸ್ಲಾಮಾಬಾದ್ನ ಜನ ನಿಬಿಡ ಮಾರುಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಬಾಂಬ್ ಸ್ಫೋಟ ಸಂಭವಿಸಿದ್ದು 23 ಮಂದಿ ಸಾವಿಗೀಡಾಗಿದ್ದಾರೆ.
ಪಾಕ್ ರಾಜಧಾನಿಯ 1-10 ಸೆಕ್ಟರ್ನಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದೆ. ಪ್ರಸ್ತುತ ಘಟನೆಯಲ್ಲಿ 23 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಹಣ್ಣಿನ ಬಾಕ್ಸ್ನಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಇದು ಉಗ್ರ ಕೃತ್ಯ ಎಂದು ಹೇಳಿದ್ದಾರೆ.
ಗಾಯಾಳುಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.