ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಮೋದಿಯನ್ನು ಕ್ಷಮೆಯಾಚಿಸಿ: ರಾಜ್‌ನಾಥ್ ಸಿಂಗ್

Vishwanath S
Updated On : 9 Apr 2014, 7:49 am

ಬೆಂಗಳೂರು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ಬಣ್ಣಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯನ್ನು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಅವರು ಬುಧವಾರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್‌ನಾಥ್ ಸಿಂಗ್, ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿರುವ ಮೋದಿ ಅವರನ್ನು ನರಹಂತಕ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಹಿಂದಿನಿಂದಲು ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂದು ಹೇಳುತ್ತಾ ಬಂದಿದೆ ಆದರೆ ದೇಶದಲ್ಲಿ ಬಡತನ ಕಡಿಮೆಯಾಗಿಲ್ಲ. ಕಾಂಗ್ರೆಸ್‌ನ ದುರಾಡಳಿತದಿಂದಾಗಿ ದೇಶದಲ್ಲಿ ಬಂಡವಾಳ ಹೂಡಲು ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ರಾಜ್‌ನಾಥ್ ಸಿಂಗ್ ದೂರಿದರು.

ದೇಶದಲ್ಲಿ ಐಟಿ ಉದ್ಯಮ ಅಭಿವೃದ್ಧಿ ಹೊಂದಿದ್ದು ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದವಧಿಯಲ್ಲಿ, ಆದರೆ ಕಾಂಗ್ರೆಸ್ ತಾನೇ ಐಟಿ ಕಾಂತ್ರಿ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದವಧಿಯಲ್ಲಿ ಐಟಿ ಕ್ಷೇತ್ರ ನೆಲಕಚ್ಚಿದೆ ಎಂದರು.

ಪಕ್ಷದ ಆದೇಶದಂತೆ ಮುತಾಲಿಕ್ ಸೇರ್ಪಡೆ ರದ್ದು
ಬೆಳಗ್ಗೆ ಪಕ್ಷಕ್ಕೆ ಸೇರಿಸಿಕೊಂಡು ಸಂಜೆ ಹೊರದಬ್ಬಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ರ ಸೇರ್ಪಡೆ ರದ್ದು ಪಡಿಸಿರುವುದನ್ನು ಸಮರ್ಥಿಸಿಕೊಂಡಿರುವ ಅವರು, ಪಕ್ಷದ ಆದೇಶದಂತೆ ಮುತಾಲಿಕ್‌ರ ಸೇರ್ಪಡೆಯನ್ನು ರದ್ದು ಪಡಿಸಲಾಯಿತು ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement