ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಯೋಗಾಧಿಕಾರಿಗಳ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ: ಕಠಿಣ ಕ್ರಮಕ್ಕೆ ಆದೇಶ

ಮಾಲ್ಡಾದಲ್ಲಿ ಚುನಾವಣಾ ಆಯೋಗದ...

Vishwanath S
Updated On : 10 Apr 2014, 5:24 am

ನವದೆಹಲಿ: ಮಾಲ್ಡಾದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ನಡೆದ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಗುರುವಾರ ಆದೇಶಿಸಿದೆ.

ಮಾಲ್ಡಾದಲ್ಲಿ ಇಂದು ಟಿಎಂಸಿ ಅಭ್ಯರ್ಥಿ ಪರ ಬೈಕ್ ರ್ಯಾಲಿ ನಡೆಸುತ್ತಿದ್ದ ಕಾರ್ಯಕರ್ತರನ್ನು ಆಯೋಗದ ಅಧಿಕಾರಿಗಳು ಪ್ರಶ್ನಿಸಿದ ಹಿನ್ನೆಲೆಯಲ್ಲಿ, ಇದರಿಂದ ಉದ್ರಿಕ್ತಗೊಂಡ ಕಾರ್ಯಕರ್ತರು ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಶೀಲಿಸಿರುವ ಕೇಂದ್ರ ಚುನಾವಣಾ ಆಯೋಗ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲುವಂತೆ ಆದೇಶಿಸಿದ್ದು, ಸಂಜೆಯೊಳಗೆ ಘಟನೆಯ ಸಂಪೂರ್ಣ ವರದಿಯನ್ನು ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಿದೆ.

ಮಾಲ್ಡಾ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಹುಸೇನ್ ಪರ 200 ಮಂದಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸುತ್ತಿದ್ದರು. ಬೈಕ್ ರ್ಯಾಲಿ ಮಾನಿಕ್‌ಚೌಕ್ ಬಳಿಗೆ ಆಗಮಿಸುತ್ತಿದ್ದಂತೆ ಮೂವರು ಚುನಾವಣಾ ಆಯೋಗದ ಅಧಿಕಾರಿಗಳು ಕಾರ್ಯಕರ್ತರನ್ನು ನಿಲ್ಲಿಸಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದೀರಾ ಎಂದು ವಿಚಾರಿಸಿದರು. ಈ ವೇಳೆ ಟಿಎಂಸಿ ಕಾರ್ಯಕರ್ತರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಾವಿತ್ರಿ ಮಿತ್ರ ಹಾಗೂ ಮಾಲ್ಡಾ ಕ್ಷೇತ್ರದ ಅಭ್ಯರ್ಥಿ ಹುಸೇನ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement