ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೆಡಿಎಸ್ ನಾಯಕ ಸಿಂಧ್ಯಾ ಶೀಘ್ರ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಪಕ್ಷದಲ್ಲಿ ಮೂಲೆಗುಂಪಾಗಿರುವ ಮಾಜಿ ಗೃಹ ಸಚಿವ ಪಿ.ಜಿ.ಆರ್.

Lingaraj Badiger
Updated On : 10 Apr 2014, 3:32 am

ಬೆಂಗಳೂರು: ಜೆಡಿಎಸ್ ಪಕ್ಷದಲ್ಲಿ ಮೂಲೆಗುಂಪಾಗಿರುವ ಮಾಜಿ ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಸಿಂಧ್ಯಾ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗಿನ ತಮ್ಮ ಹಳೆಯ ವೈಷಮ್ಯವನ್ನು ಮರೆತಿದ್ದು, ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಸಿಂಧ್ಯಾ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್‌ನಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಈ ವೇಳೆ, ಸಿಂಧ್ಯಾ ಅವರು ತಮ್ಮ ವಿರುದ್ಧ ಜಯ ಗಳಿಸಲು ಮಾಟ, ಮಂತ್ರ ಮಾಡಿಸಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದರು.

ಈ ಇಬ್ಬರು ನಾಯಕರು ಈಗ ತಮ್ಮ ಹಳೆಯ ದ್ವೇಷವನ್ನು ಮರೆತು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದು, ಸಿಂಧ್ಯಾ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಶಿವಕುಮಾರ್ ಕನಕಪುರದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ತಮ್ಮ ಬೆಂಬಲಿಗರ ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಸಿಂಧ್ಯಾ ಶೀಘ್ರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ  ನಾನು ಮತ್ತು ಸಿಂಧ್ಯಾ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾಗಿ ಹೋರಾಡಿದ್ದೆವು. ಈಗ ಒಟ್ಟಿಗೆ ಸೇರುವ ಕಾಲ ಬಂದಿದೆ. ಈಗಾಗಲೇ ಬಿಜೆಪಿಯ ಮಾಜಿ ಸಂಸದ ಎಂ. ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದು, ಇನ್ನೂ ಕೆಲವರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ  ಎಂದು ಡಿಕೆಶಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement