ನೀತಿ ಸಂಹಿತೆ ಉಲ್ಲಂಘನೆ: ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ..
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ಗುರುವಾರ ಎಚ್ಚರಿಕೆ ನೀಡಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ಕರೆದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ವೈಯಕ್ತಿಕ ನಿಂದನೆ ಮಾಡಿರುವ ಸಿಎಂ ವಿರುದ್ಧ ಚುನಾವಣಾ ಆಯೋಗ ಗರಂ ಆಗಿದ್ದು, ಮತ್ತೆ ನೀತಿ ಸಂಹಿತೆ ಉಲ್ಲಂಘಿಸದಂತೆ ಕೇಂದ್ರ ಚುನಾವಣಾ ಆಯೋಗ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ.