ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅತ್ಯಾಚಾರ ಎಂಬುದೇ ನಾಚಿಕೆಗೇಡಿನ ಸಂಗತಿ: ದೇವೇಗೌಡ

ಅತ್ಯಾಚಾರಿಗಳ ಪರ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ...

Vishwanath S
Updated On : 11 Apr 2014, 7:32 am

ಬೆಂಗಳೂರು: ಅತ್ಯಾಚಾರಿಗಳ ಪರ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಹೇಳಿಕೆಯನ್ನು ನಾನು ಬೆಂಬಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಎಂಬುದೇ ನಾಚಿಕೆಗೇಡಿನ ಸಂಗತಿ. ಇದರ ಬಗ್ಗೆ ಮಾತನಾಡಲು ನಾನು ಬಯಸುವುದಿಲ್ಲ ಎಂದರು. ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವ ಸ್ವತಂತ್ರ್ಯ ಒಬ್ಬ ಪಕ್ಷದ ನಾಯಕನಿಗೆ ಇರುತ್ತದೆ ಇದು ಮುಲಾಯಂ ಅವರ ವೈಯಕ್ತಿಕ ಹೇಳಿಕೆ ಇದನ್ನು ನಾನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಚುನಾವಣಾ ಪ್ರಚಾರದ ವೇಳೆ ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಯಾಕೆ? ಆಕಸ್ಮಿಕವಾಗಿಯೂ ಅತ್ಯಾಚಾರಗಳು ಸಂಭವಿಸುತ್ತವೆ. ಹೀಗಾಗಿ ಸಣ್ಣ ತಪ್ಪಿಗೆ ಯುವಕರಿಗೆ ಗಲ್ಲು ಶಿಕ್ಷೆಯೆಂಬ ಘೋರ ಶಿಕ್ಷೆ ವಿಧಿಸಬೇಕ ಎಂದಿದ್ದರು. ಅಲ್ಲದೆ ಎಸ್‌ಪಿ ಅಧಿಕಾರಕ್ಕೆ ಬಂದರೆ ಹೊಸ ಅತ್ಯಾಚಾರ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಹೇಳಿದ್ದರು. ಈ ಹೇಳಿಕೆಗೆ ದೇಶವ್ಯಾಪ್ತಿ ಖಂಡನೆ ವ್ಯಕ್ತವಾಗಿತ್ತು.

ಮುಂಬೈನ ಶಕ್ತಿ ಮಿಲ್ಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್ ಕೋರ್ಟ್ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಗಳ ಪರ ಮುಲಾಯಂ ಮಾತನಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement