ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ನರೇಂದ್ರ...
ನವದೆಹಲಿ: ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ನರೇಂದ್ರ ಮೋದಿ ಅವರಿಗೆ ನೀಡಿರುವ ಕ್ಲೀನ್ ಚಿಟ್ನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ (ಎಸ್ಐಟಿ) ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ವಕೀಲೆ ಫಾತಿಮಾ ಎ ಎಂಬುವವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ನ್ಯಾಯಾಮೂರ್ತಿ ಎಚ್ಎಲ್ ದತ್ತು ಮತ್ತು ಎಸ್ಎ ಬಾಬ್ಡೆ ಅವರನ್ನೊಳಗೊಂಡ ನ್ಯಾಯಾಪೀಠ ಅರ್ಜಿಯನ್ನು ತಿರಸ್ಕರಿಸಿದ್ದು, ವಕೀಲೆ ಸಲ್ಲಿಸಿರುವ ಅರ್ಜಿ ನಿರಾಧಾರವಾಗಿದೆ ಎಂದು ಹೇಳಿದೆ.