ಲೋಕಸಭೆ ಚುನಾವಣೆಗೆ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ತೃತೀಯ ರಂಗದ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿರುವ...
ಬೆಂಗಳೂರು: ತೃತೀಯ ರಂಗದ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿರುವ ಜೆಡಿಎಸ್ ಶುಕ್ರವಾರ ಲೋಕಸಭೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ವಿಶೇಷ ಕಾನೂನು ಸೇರಿದಂತೆ ಹಲವು ಭರವಸೆಗಳನ್ನೊಳಗೊಂಡ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದರು.
ಜೆಡಿಎಸ್ ಭರವಸೆಗಳು...
ಭ್ರಷ್ಟಚಾರ ನಿಯಂತ್ರಣಕ್ಕಾಗಿ ವಿಶೇಷ ಕಾನೂನು
ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಅಪರಾಧ
ನಿರದ್ಯೋಗಿ ಯುವಕರಿಗೆ ತಿಂಗಳ ಭತ್ಯೆ ನೀಡಲು ಕ್ರಮ
ಗ್ರಾಮೀಣ ಭಾರತಕ್ಕಾಗಿ ಹೊಸ ನೀತಿ
ಟ್ಯಾಕ್ಸಿ, ಆಟೋ ಚಾಲಕರಿಗೆ ಭದ್ರತೆ
ಕ್ರೀಡಾ ಅಭಿವೃದ್ಧಿಗಾಗಿ ವಿಶೇಷ ಕ್ರೀಡಾ ನೀತಿ ಘೋಷಣೆ
ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ಪ್ರೋತ್ಸಾಹ
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು
ಉದ್ಯೋಗದಲ್ಲಿ ಮಹಿಳೆಯರಿಗೆ ವಿಶೇಷ ಮೀಸಲಾತಿ
ಅಂತರಾಜ್ಯ ನದಿಗಳ ಜೋಡಣೆಗೆ ಹೊಸ ನೀತಿ
ನದಿಗಳು ದೇಶದ ಆಸ್ತಿ ಎಂದು ಘೋಷಣೆ