ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಮೇಠಿಯಿಂದ ರಾಹುಲ್ ಗಾಂಧಿ ನಾಮಪತ್ರ

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ...

Vishwanath S
Updated On : 12 Apr 2014, 4:44 am

ಅಮೇಠಿ: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಗೌರಿಗಂಜ್‌ನಿಂದ ಅಮೇಠಿ ಜಿಲ್ಲಾಧಿಕಾರಿ ಕಚೇರಿವರೆಗೆ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸಹ ರಾಹುಲ್‌ಗೆ ಸಾಥ್ ನೀಡಿದರು.

ಬರೋಬ್ಬರಿ 40 ಕಿ.ಮೀ ದೂರದಷ್ಟು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಳಿಸಿದ್ದು, ಅಮೇಥಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಸ್ಫರ್ಧೆ ಏರ್ಪಟ್ಟಿದೆ. ಬಿಜೆಪಿಯಿಂದ ಸ್ಮೃತಿ ಇರಾನಿ ಹಾಗೂ ಎಎಪಿಯಿಂದ ಕುಮಾರ್ ವಿಶ್ವಾಸ್ ಸ್ಪರ್ಧಿಸುತ್ತಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಘೋಷಿಸಿಕೊಂಡ ಆಸ್ತಿ ವಿವರ
ರಾಹುಲ್ ಒಟ್ಟು ಆಸ್ತಿ ಮೌಲ್ಯ 8.7 ಕೋಟಿ
ರಾಹುಲ್ ಗಾಂಧಿ ಹೆಸರಲ್ಲಿ ಸ್ವಂತ ಮನೆ ಹಾಗೂ ಯಾವುದೇ ಜಮೀನು ಇಲ್ಲ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement