'ಕೈ' ಹಿಡಿದ ಉಮಾಕಾಂತ್ ನಾಗಮಾರಪಲ್ಲಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಶಾಸಕ..
ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರ ಉಮಾಕಾಂತ್ ನಾಗಮಾರಪಲ್ಲಿ ಅವರು ಬಿಜೆಪಿಗೆ ಗುಡ್ಬೈ ಹೇಳಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ.
ಬಿಜೆಪಿ ಟಿಕೆಟ್ ವಂಚಿತ ಉಮಾಕಾಂತ್ ಅವರು ಇಂದು ಔರಾದ್ನ ಖಾಸಗಿ ಹೋಟೆಲ್ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ, ಕಾಂಗ್ರೆಸ್ಗೆ ಬೆಂಬಲ ನೀಡುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಬೀದರ್ನ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎನ್.ಧರಂ ಸಿಂಗ್ ಅವರ ಪುತ್ರ ವಿಜಯ್ ಸಿಂಗ್ ಸಹ ಭಾಗವಹಿಸಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಕಾಂತ್, ಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.