ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಛತ್ತೀಸ್‌ಗಡದಲ್ಲಿ ನಕ್ಸಲ್ ದಾಳಿ: 12 ಸಾವು

ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದ್ದು ಜಿಲ್ಲೆಯಲ್ಲಿ...

Vishwanath S
Updated On : 12 Apr 2014, 3:46 am

ಛತ್ತೀಸ್‌ಗಡ: ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದ್ದು ಜಿಲ್ಲೆಯಲ್ಲಿ ಎರಡು ಕಡೆ ಬಾಂಬ್ ಸ್ಫೋಟಿಸಿದ್ದಾರೆ. ಇದರಲ್ಲಿ ಯೋಧರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ.

ಬಿಜಾಪುರ ಜಿಲ್ಲೆ ಕುಟರುವಿನಲ್ಲಿ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದಾರೆ ಇದರಲ್ಲಿ ಇಬ್ಬರು ಯೋಧರು ಸೇರಿದಂತೆ ಸಾರ್ವತ್ರಿಕ ಚುನಾವಣೆಗೆ ನಿಯೋಜಿಸಿದ್ದ ಐದು ಮಂದಿ ಚುನಾವಣಾ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.

ಮತ್ತೊಂದೆಡೆ ಛತ್ತೀಸ್‌ಗಡ ಜಿಲ್ಲೆಯ ದರ್ಭಾದಲ್ಲಿ ನಕ್ಸಲರು ಆಂಬುಲೇನ್ಸ್‌ವೊಂದನ್ನು ಸ್ಫೋಟಿಸಿದ್ದು, ಇದರಲ್ಲಿ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿದ್ದ 5 ಮಂದಿ ಸಿಆರ್‌ಪಿಎಫ್ ಯೋಧರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಛತ್ತೀಸ್‌ಗಡದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ವೇಳೆ ದಾಳಿ ನಡೆಸಿದ್ದರು. ಅಲ್ಲದೆ ಚುನಾವಣಾಧಿಕಾರಿಗಳಿಂದ ಮತಯಂತ್ರಗಳನ್ನು ಕಸಿದು ಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ನಕ್ಸಲರು ಸಾರ್ವತ್ರಿಕ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣೆಯನ್ನು ಬಹಿಷ್ಕರಿಸುವಂತೆ ಜನರಿಗೆ ಬೆದರಿಕೆಯೊಡ್ಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement