ಉಗ್ರರ ದಾಳಿ: 2 ಪೊಲೀಸ್ ಸಾವು
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಮುಖಂಡನ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.
ಇಂದು ರಾಜಕೀಯ ಮುಖಂಡನ ಮನೆ ಮೇಲೆ ಉಗ್ರರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಲಾಗಿದ್ದ ಭದ್ರತಾ ಪೊಲೀಸರಿಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ದಾಳಿಯಲ್ಲಿ ಮತ್ತೋರ್ವ ಪೊಲೀಸ್ ಗೂ ಗಾಯವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚುವರಿ ಭದ್ರತಾ ಪಡೆಯನ್ನು ರವಾನಿಸಲಾಗಿದೆ.