ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ರಾಜ್ಯದಲ್ಲಿ ಬಿಜೆಪಿ ಪರ ಪವನ್ ಪ್ರಚಾರ

ಬಿಜೆಪಿ ಪರ ಪ್ರಚಾರ ಮಾಡಲು ನಿರ್ಧರಿ...

Vishwanath S
Updated On : 14 Apr 2014, 4:58 am

ಬೆಂಗಳೂರು: ಬಿಜೆಪಿ ಪರ ಪ್ರಚಾರ ಮಾಡಲು ನಿರ್ಧರಿಸಿರುವ ಜನಸೇನಾ ಪಕ್ಷ ಸಂಸ್ಥಾಪಕ ಪವರ್‌ಸ್ಟಾರ್ ಪವನ್ ಕಲ್ಯಾಣ್ ನಾಳೆಯಿಂದ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.

ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಇಂದು ಚಿಕ್ಕಬಳ್ಳಾಪುರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ಮಾಡಿದ್ದ ಬೆನ್ನಲ್ಲೇ ಅಣ್ಣನ ವಿರುದ್ಧ ತೊಡೆ ತಟ್ಟಿ ನಿಂತಿರುವ ಪವನ್ ಕಲ್ಯಾಣ್ ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಪರ ಪ್ರಚಾರ ಮಾಡಲಿರುವ ಪವನ್ ಕರ್ನಾಟಕದಿಂದಲೆ ತಮ್ಮ ಪ್ರಚಾರ ಆರಂಭಿಸಿದ್ದಾರೆ.

ನಾಳೆ ಹೆಲಿಕಾಫ್ಟರ್ ಮೂಲಕ ರಾಜ್ಯಕ್ಕೆ ಆಗಮಿಸುವ ಪವನ್, ಬೆಳಿಗ್ಗೆ 11 ಗಂಟೆಗೆ ಕೋಲಾರದಲ್ಲಿ ರೋಡ್ ಶೋ ಮೂಲಕ ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ. ನಂತರ ರಾಯಚೂರಿನಲ್ಲಿ 1 ಗಂಟೆಗೆ ರೋಡ್ ಶೋ ನಡೆಸಿದ ಬಳಿಕ ರಾಯಚೂರಿನ ಮಹಿಳಾ ಸಮಾಜ ಗ್ರೌಂಡ್ಸ್‌ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಆನಂತರ ಗುಲ್ಬರ್ಗಾದ ಗುರುಮಠಕಲ್‌ನಲ್ಲಿ ರೋಡ್‌ಶೋ ನಡೆಸುತ್ತಾ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ.

ಇತ್ತೀಚೆಗಷ್ಟೇ ಆಂಧ್ರದಲ್ಲಿ ಜನಸೇನಾ ಪಕ್ಷವನ್ನು ಕಟ್ಟಿದ್ದ ಪವನ್ ಕಲ್ಯಾಣ್ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಪಕ್ಷ ಕಟ್ಟಿದ ನಂತರ ಮೋದಿ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದ ಪವನ್ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement