ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರತ್ಯಾರೋಪದಲ್ಲಿ ಜಯಲಲಿತಾ, ಮೋದಿ

Vishwanath S
Updated On : 14 Apr 2014, 5:20 am

ಚೆನ್ನೈ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ನಿನ್ನೆ ತಮಿಳುನಾಡಿನ ಕರೂರ್‌ನಲ್ಲಿ ಎಐಎಡಿಎಂಕೆ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಮಾತನಾಡಿದ ಜಯಲಲಿತಾ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವ್ಯತ್ಯಾಸಗಳಿಲ್ಲ ಎರಡು ಪಕ್ಷಗಳು ಒಂದೇ ಎಂದು ಕಿಡಿಕಾರಿದರು. ಕಾವೇರಿ ನದಿ ನೀರು ಹಂಚಿಕೆಯಲ್ಲಿ ವಿಚಾರದಲ್ಲಿ ಎರಡು ಪಕ್ಷಗಳು ಒಂದೇ ಧೋರಣೆಯನ್ನು ಹೊಂದಿವೆ ಎಂದರು.

ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸಹ ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲೂ ಈ ಕುರಿತು ಪ್ರಸ್ತಾಪಿಸಿಲ್ಲ ಎಂದು ಆರೋಪಿಸಿದರು.

ಮತ್ತೊಂದೆಡೆ ರಾಜ್ಯದಲ್ಲಿ ಆರು ರಾಜಕೀಯ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡ ನಂತರ ಇದೇ ಮೊದಲ ಬಾರಿಗೆ ಪಕ್ಷದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ವಾಗ್ದಾಳಿ ನಡೆಸಿದರು. ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷಗಳು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸದೆ ಕಚ್ಚಾಟದಲ್ಲಿ ತೊಡಗಿವೆ ಎಂದು ಆರೋಪಿಸಿದರು.

ಇದೇ ವೇಳೆ, ತಮಿಳುನಾಡಿನ ಮೀನುಗಾರರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಪ್ರಸ್ತಾಪಿಸಿದ ಮೋದಿ, ಶ್ರೀಲಂಕಾ ನೌಕಾ ದಳದಿಂದ ನಿತ್ಯ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಮೀನುಗಾರರನ್ನು ರಕ್ಷಿಸಲು ಬಿಜೆಪಿ ಸರ್ಕಾರಕ್ಕೆ ಮಾತ್ರ ಸಾಧ್ಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement