ಪೆಟ್ರೋಲ್ ದರ 70 ಪೈಸೆ ಇಳಿಕೆ
ನವದೆಹಲಿ: ಅಮೆರಿಕಾದ ಡಾಲರ್ ಎದುರು ರುಪಾಯಿ ಮೌಲ್ಯ ಏರಿಕೆಯಾದ ಹಿನ್ನೆಲೆಯಲ್ಲಿ ದೇಶೀಯ ತೈಲ ಕಂಪನಿಗಳು ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 70 ಪೈಸೆಯಷ್ಟು ಕಡಿತಗೊಳಿಸಿದ್ದು, ಪರಿಷ್ಕೃತ ದರ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ.
ರುಪಾಯಿ ಮೌಲ್ಯ ಚೇತರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 70 ಪೈಸೆಯಷ್ಟು ಕಡಿಮೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಗ್ರಾಹಕರಿಗೆ ಸ್ವಲ್ಪ ಸಮಾಧಾನ ತಂದಿದೆ. ಕಡಿತಗೊಂಡಿರುವ ಪೆಟ್ರೋಲ್ ದರ, ಸ್ಥಳೀಯ ಮಾರಾಟ ತೆರಿಗೆ ಅಥವಾ ಮೌಲ್ಯವರ್ಧಿತ ತೆರಿಗೆಯಿಂದ ಹೊರತಾಗಿದೆ ಎಂದು ತಿಳಿದು ಬಂದಿದೆ.