ಲೈಂಗಿಕ ಅಲ್ಪಸಂಖ್ಯಾತರನ್ನು 3ನೇ ಲಿಂಗವಾಗಿ ಪರಿಗಣಿಸಿ: ಸುಪ್ರೀಂ ಆದೇಶ
ಲೈಂಗಿಕ ಅಲ್ಪ ಸಂಖ್ಯಾತರನ್ನು ಕಡೆಗಣಿಸಬಾರದು. ಅವರು ಸಹ ಈ ದೇಶದ ನಾಗರಿಕರಾಗಿದ್ದು, ಎಲ್ಲಾ ಕ್ಷೇತ್ರದಲ್ಲೂ ಅವರಿಗೆ ಆದ್ಯತೆ ..
ನವದೆಹಲಿ: ಲೈಂಗಿಕ ಅಲ್ಪ ಸಂಖ್ಯಾತರನ್ನು ಕಡೆಗಣಿಸಬಾರದು. ಅವರು ಸಹ ಈ ದೇಶದ ನಾಗರಿಕರಾಗಿದ್ದು, ಎಲ್ಲಾ ಕ್ಷೇತ್ರದಲ್ಲೂ ಅವರಿಗೆ ಆದ್ಯತೆ ನೀಡುಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ಲೈಂಗಿಕ ಅಲ್ಪಸಂಖ್ಯಾತರನ್ನು ಮೂರನೇ ಲಿಂಗವೆಂದು ಪರಿಗಣಿಸಬೇಕು ಎಂದು ನ್ಯಾ.ಕೆ.ಎಸ್. ರಾಧಾಕೃಷ್ಣ ಹಾಗೂ ನ್ಯಾ.ಎ.ಕೆ.ಸಿಕ್ರಿ ಅವರನ್ನೊಳಗೊಂಡ ಸುಪ್ರೀಂ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಅಲ್ಲದೆ ಲೈಂಗಿಕ ಅಲ್ಪಸಂಖ್ಯಾತರನ್ನು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ವರ್ಗವೆಂದು ಪರಿಗಣಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವರಿಗೆ ಮೀಸಲಾತಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಲೈಂಗಿಕ ಅಲ್ಪ ಸಂಖ್ಯಾತರಿಗೆ ವಿಶೇಷ ಸ್ಥಾನಮಾನ ಮತ್ತು ರಕ್ಷಣೆ ನೀಡುವ ಬಗ್ಗೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಚುನಾವಣಾ ಗುರುತಿನ ಚೀಟಿ, ಪಾಸ್ಪೊರ್ಟ್, ಚಾಲನಾ ಪರವಾನಿಗೆ ಸೇರಿದಂತೆ ಇತರೆ ಗುರುತಿನ ದಾಖಲೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಮೂರನೇ ಲಿಂಗವೆಂದು ಪರಿಗಣಿಸುವಂತೆ ಆದೇಶಿಸಿದೆ.