ಸಂಜೆ 6ರ ನಂತರ ಮದ್ಯ ಮಾರಾಟ ನಿಷೇಧ
ಬೆಂಗಳೂರು: ರಾಜ್ಯದಲ್ಲಿ ಗುರುವಾರ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಸಂಜೆ 6 ಗಂಟೆಯ ನಂತರ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ಮಂಗಳವಾರ ಹೇಳಿದ್ದಾರೆ.
ಚುನಾವಣಾ ಬಹಿರಂಗ ಪ್ರಚಾರಕ್ಕೆ ಸಂಜೆ 6 ಗಂಟೆಗೆ ತೆರೆಬಿದ್ದಿದ್ದು ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅನಿಲ್ ಕುಮಾರ್ ಝಾ, ರಾಜ್ಯದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಬಹುದು ಎಂದರು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಯ ನಂತರ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದರು.