ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರೈಲಿಗೆ ಬುಲೆರೊ ಡಿಕ್ಕಿ, 2 ಸಾವು

ಸಾಂದರ್ಭಿಕ ಚಿತ್ರ
Vishwanath S
Updated On : 16 Apr 2014, 4:18 am

ಹುಬ್ಬಳ್ಳಿ: ಹುಬ್ಬಳ್ಳಿ ಸಾಯಿನಗರದ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿಗೆ ಬುಲೆರೊ ವಾಹನ ಡಿಕ್ಕಿ ಹೊಡೆದ್ದಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ ದಾದರ್‌ ನಡುವೆ ಚಲಿಸುವ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಆಗಮಿಸುವ ವೇಳೆ ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ನಲ್ಲಿ  ಬುಲೆರೊ ವಾಹನ್ ನೇರವಾಗಿ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮೃತರಾದವರನ್ನು ದಾಂಡೇಲಿ ಮೂಲದವರಾದ ಅಕ್‌ಬರ್‌(45),ಅಬ್ಟಾಸ್‌ (32) ಎಂದು ಗುರುತಿಸಲಾಗಿದ್ದು ,ಅವಘಡದ ವೇಳೆ ಬೊಲೆರೊದಲ್ಲಿದ್ದ ಬಶೀರ್‌ ಎನ್ನುವವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಅವರನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಕ್ಸ್‌ಪ್ರೆಸ್ ರೈಲಿಗೆ ಬುಲೆರೊ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement