ಬೆಂಗಳೂರು ಗ್ರಾಮಾಂತರದಲ್ಲಿ ಮರು ಚುನಾವಣೆಗೆ ಆಪ್ ಆಗ್ರಹ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮರುಚುನಾವಣೆ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಮರು ಚುನಾವಣೆ ನಡಸೇಬೇಕು ಎಂದು ರವಿಕೃಷ್ಣಾರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಗಾಗಿ ಹಣ ಹಂಚಿಕೆಯಾಗಿದ್ದು, ಅಕ್ರಮ ನಡೆದಿದೆ. ಹಣ ಹಂಚಿಕೆಯನ್ನು ತಡೆಯಲು ಯತ್ನಿಸಿದಾಗ ಮೂವರು ಆಪ್ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಹಲ್ಲೆ ಮಾಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ ಎಂದು ರವಿಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಹಣ ಹಂಚಿಕೆ ಅಕ್ರಮದಲ್ಲಿ ರಾಮನಗರ ಡಿಸಿ, ಎಸ್ಪಿ, ಸಚಿವ ಡಿ.ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಸಹಕಾರ ನೀಡಿದ್ದಾರೆ ಎಂದು ಅವರು ದೂರಿದ್ದಾರೆ.
ಗ್ರಾಮಾಂತರದಲ್ಲಿ ಹಣ ಹಂಚಿಕೆ ಮಾಡಿ ಜನರನ್ನು ಖರೀದಿಸಿದ್ದಾರೆ, ಈ ಅಕ್ರಮವನ್ನು ತಡೆಯುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ರವಿಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ.