ರಾಹುಲ್ ವಿರುದ್ಧ ದೂರು ದಾಖಲಿಸಲು ವಿಶ್ವಾಸ್ ನಿರ್ಧಾರ
ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಅಮೇತಿ ಕ್ಷೇತ್ರದ ಅಭ್ಯರ್ಥಿ...
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಅಮೇತಿ ಕ್ಷೇತ್ರದ ಅಭ್ಯರ್ಥಿ ಕುಮಾರ್ ವಿಶ್ವಾಸ್ ಅವರು ಪ್ರಾಣ ಬೆದರಿಕೆಯ ದೂರು ದಾಖಲಿಸಲು ಮುಂದಾಗಿದ್ದಾರೆ.
ತನಗೆ ಪ್ರಾಣ ಬೆದರಿಕೆ ಇದೆ ಎಂದು ಹೇಳಿರುವ ಕುಮಾರ್ ವಿಶ್ವಾಸ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ಅಳಿಯ ರಾಬರ್ಟ್ ವಾದ್ರಾ ಅವರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ ಗಾಂಧಿ ಕುಟಂಬದವರಿದಂ ಪ್ರಾಣ ಬೆದರಿಕೆ ಇದೆ ಎಂದು ಆರೋಪ ಮಾಡಿರುವ ಕುಮಾರ್ ವಿಶ್ವಾಸ್ ದೂರು ದಾಖಲಿಸಲು ನಿರ್ಧರಿಸಿದ್ದಾರೆ.