ಏ.24ಕ್ಕೆ ವಾರಾಣಾಸಿಯಲ್ಲಿ ಮೋದಿ ನಾಮಪತ್ರ ಸಲ್ಲಿಕೆ: ಅಮಿತ್ ಶಾ
ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ವಾರಣಾಸಿಯಲ್ಲಿ...
ನವದೆಹಲಿ: ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೋದಿ ಆಪ್ತ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮೋದಿ, ಇದೇ ತಿಂಗಳು 24ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಪ್ರಧಾನಿಯಾಗಿ ಆಯ್ಕೆಯಾದರೆ ಉತ್ತರಪ್ರದೇಶದಲ್ಲಿರುವ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಸರ್ಕಾರವನ್ನು ಕಿತ್ತೋಗೆಯಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದಲ್ಲಿ 2 ಹಂತದ ಚುನಾವಣೆ ನಡೆಯಲಿದ್ದು, 21 ಸ್ಥಾನಗಳಲ್ಲಿ 18 ಸ್ಥಾನಗಳು ಬಿಜೆಪಿ ಪಾಲಾಗಲಿದೆ ಎಂದಿರುವ ಅಮಿತ್ ಶಾ, ಸಮಾಜವಾದಿ ಪಕ್ಷ ಈ ಬಾರಿ ಮುಖಭಂಗ ಅನುಭವಿಸಲಿದೆ ಎಂದು ತಿಳಿಸಿದ್ದಾರೆ.
ವಾರಣಾಸಿಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರು ಎಕೆ-47ಎಸ್ ಅವ್ಯವಹಾರದಲ್ಲಿ ಭಾಗಿಯಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರಿಗೆ ಖಂಡಿತ ಸೋಲುಂಟಾಗಲಿದೆ ಎಂದು ಹೇಳಿದ್ದಾರೆ.