ಮೇ.24ರಂದು ಹಾಜಾರಾಗುವಂತೆ ಕೇಜ್ರಿವಾಲ್‌ಗೆ ಕೋರ್ಟ್ ಸೂಚನೆ
ಮಾನನಷ್ಟ ಮೊಕದ್ದಮೆ ಪ್ರಕರಣ...
ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಮೇ.24ರಂದು ನ್ಯಾಯಾಲಯಕ್ಕೆ ಹಾಜಾರಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಶನಿವಾರ ಆದೇಶಿಸಿದೆ.
ಆಮ್ ಆದ್ಮಿ ಪಕ್ಷ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆಪ್‌ನ ಮೂವರು ನಾಯಕರು ಮೇ.24 ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಇಲ್ಲವಾದಲ್ಲಿ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಮೂರ್ತಿ ಸುನಿಲ್ ಕುಮಾರ್ ಶರ್ಮಾ ಸೂಚಿಸಿದ್ದಾರೆ.
ಕೇಂದ್ರ ಟೆಲಿಕಾಂ ಸಚಿವ ಕಪಿಲ್ ಸಿಬಲ್ ಪುತ್ರ ಹಾಗೂ ವಕೀಲ ಅಮಿತ್ ಸಿಬಲ್ ಅವರು ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಮೂರ್ತಿ ಸುನಿಲ್ ಕುಮಾರ್ ಶರ್ಮಾ ಅವರು, ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಪ್ರಶಾಂತ್ ಭೂಷಣ್ ಮತ್ತು ಶಾಜಿಯಾ ಇಲ್ಮಿ ನ್ಯಾಯಾಲಯದ ಮುಂದೆ ಮೇ 24ರೊಳಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.