ಮೋದಿಯನ್ನಾ ಟೀಕಿಸಿದವರಿಗೆ ಭಾರತದಲ್ಲಿ ಜಾಗವಿಲ್ಲ: ಬಿಜೆಪಿ ನಾಯಕ
ಭಾರತೀಯ ಜನತಾ ಪಕ್ಷದ ಪ್ರಧಾನಿ...
ಗೊಡ್ಡ, ಜಾರ್ಕಾಂಡ್: ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೋದಿ ಪ್ರಧಾನಿಯಾಗವುದನ್ನು ಯಾರ್ಯಾರು ತಡೆಯುತ್ತಾರೋ ಅವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಇಂದು ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿಯನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸದವರಿಗೆ ಭಾರತದಲ್ಲಿ ಜಾಗವಿಲ್ಲ. ಅಂತಹವರಿಗೆ ಪಾಕಿಸ್ತಾನದಲ್ಲಿ ಮಾತ್ರ ಜಾಗವಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಮುಂದೆಯೇ ಇಂತಹ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜಕೀಯದಲ್ಲಿ ಕೋಲಾಹಲಕ್ಕೆ ದಾರಿ ಮಾಡಿಕೊಟ್ಟಂತಾಗಿದೆ.