ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣ: ಕಂಡಕ್ಟರ್ ಕಮಲಾಕರ್ ಆತ್ಮಹತ್ಯೆ

ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ಬಸ್ ಕಂಡಕ್ಟರ್ ...

Mainashree
Updated On : 19 Apr 2014, 4:29 am

ಕುಮಟಾ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ಬಸ್ ಕಂಡಕ್ಟರ್ ಕಮಲಾಕರ್ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ ಸರ್ಕಾರಿ ಬಸ್ ನಿರ್ವಾಹಕ ಕಮಲಾಕರ್ ಮೇಲೆ ಪ್ರಕರಣ ದಾಖಲಾಗಿತ್ತು. ಕಮಲಾಕರ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನಿನ್ನೆ ಬಾಲಕಿ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ್ದಳು.

ಈ ಹಿನ್ನಲೆಯಲ್ಲಿ ಇಂದು ಯಲ್ಲಾಪುರದಲ್ಲಿ ಕಮಲಾಕರ್ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೋಂದ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ತೀವ್ರ ಸುಟ್ಟಗಾಯಗಳಾದ ಬಾಲಕಿಯನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಳು.

ಆರೋಪಿ ಕಮಲಾಕರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement