ಕಾಂಗ್ರೆಸ್ ಅಭ್ಯರ್ಥಿ ನೈಶಾದ್ ದೇಸಾಯಿ ಬಂಧನ
ಅನುಮತಿ ಇಲ್ಲದೆ ಸಭೆ ನಡೆಸಿದ ಆರೋಪದ ಮೇಲೆ ಸೂರತ್ ಲೋಕಸಭಾ...
ಸೂರತ್: ಅನುಮತಿ ಇಲ್ಲದೆ ಸಭೆ ನಡೆಸಿದ ಆರೋಪದ ಮೇಲೆ ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೈಶಾದ್ ದೇಸಾಯಿ ಅವರನ್ನು ಭಾನುವಾರ ಬಂಧಿಸಲಾಗಿದೆ.
ಸೂರತ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನೈಶಾದ್ ದೇಸಾಯಿ ವಿರುದ್ಧ ಅನುಮತಿ ಇಲ್ಲದೆ ಸಭೆ ನಡೆಸಿದ ಆರೋಪದಡಿ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಇಂದು ದೇಸಾಯಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.