ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಹಿಳೆಯರ ಸುರಕ್ಷತೆ ಬಗ್ಗೆ ಚಿಂತೆ ಯಾರಿಗಿದೆ?: ಮೋದಿ

ದೇಶದಲ್ಲಿ ಮಹಿಳೆಯರ ಬಗ್ಗೆ ಚಿಂತನೆ ಯಾರಿಗಿದೇ? ಎಂದು ಬಿಜೆಪಿ...

Mainashree
Updated On : 20 Apr 2014, 4:26 am

ಛತೀಸ್‌ಗಡ: ದೇಶದಲ್ಲಿ ಮಹಿಳೆಯರ ಬಗ್ಗೆ ಚಿಂತನೆ ಯಾರಿಗಿದೇ? ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾನುವಾರ ಪ್ರಶ್ನಿಸಿದ್ದಾರೆ.

ಛತ್ತೀಸ್‌ಗಡ್‌ನ ವಿಶ್ರಾಂಪುರದಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಮಹಿಳೆಯರಿಗೆ ರಕ್ಷಣೆ. ಬಿಜೆಪಿ ಆಡಳಿತ ಇರುವ ಕಡೆ ಮಹಿಳೆಯರಿಗೆ ರಕ್ಷಣೆ ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್ ಇದರಲ್ಲಿ ವಿಫಲವಾಗಿದೆ ಎಂದು ಮೋದಿ ಆಪಾದಿಸಿದ್ದಾರೆ.

ಮಹಿಳೆಯರಿಗೆ ಅನೇಕ ಸೌಲಭ್ಯ ಒದಗಿಸಿದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಉತ್ತರ ಕೊಡಲಿ ಎಂದು ಮೋದಿ ಸವಾಲು ಹಾಕಿದ್ದಾರೆ.

ದೆಹಲಿಯ ನಿರ್ಭಯ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ನ್ಯಾಯಾ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ನಿರ್ಭಯ ಫಂಡ್‌ನಲ್ಲಿ 1.ರೂ ಬಳಕೆಯಾಗಿಲ್ಲ. ಯುಪಿಎಂ ಸರ್ಕಾರದಲ್ಲಿ ತಾಯಿ ಮಗನದೇ ಆಡಳಿತ. ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಮೋದಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement