ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗಿರಿರಾಜ್ ಸಿಂಗ್ ಹೇಳಿಕೆ ಖಂಡಿಸಿದ ಇಸ್ಲಾಂ ಮೌಲ್ವಿಗಳು

ಮೋದಿ ವಿರೋಧಿಗಳಿಗೆ ಭಾರತದಲ್ಲಿ ಜಾಗವಿಲ್ಲ, ಪಾಕಿಸ್ತಾನಕ್ಕೆ ತೆರಳಲಿ ಎಂದಿದ್ದ..

Mainashree
Updated On : 21 Apr 2014, 4:28 am

ನವದೆಹಲಿ: ಮೋದಿ ವಿರೋಧಿಗಳಿಗೆ ಭಾರತದಲ್ಲಿ ಜಾಗವಿಲ್ಲ, ಪಾಕಿಸ್ತಾನಕ್ಕೆ ತೆರಳಲಿ ಎಂದಿದ್ದ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಹೇಳಿಕೆಯನ್ನು ಇಸ್ಲಾಂ  ಮೌಲ್ವಿಗಳು ಖಂಡಿಸಿದ್ದಾರೆ.

ಭಾರತ ಎಲ್ಲರಿಗೂ ಸೇರಿದ್ದು, ಗಿರಿರಾಜ್ ಸಿಂಗ್ ತರಹ ಚಿಂತಿಸುವವರು ಪಾಕಿಸ್ತಾನದಲ್ಲಿ ಬೇಕಾದಷ್ಟು ಮಂದಿ ಇದ್ದಾರೆ, ಹಾಗಾಗಿ ಗಿರಿರಾಜ್ ಅವರೇ ಪಾಕಿಸ್ತಾನಕ್ಕೆ ಹೋಗಲಿ ಎಂದು ಮೌಲನ ಮೊಹಮ್ಮದ್ ಮದನಿ ಮೌಲ್ವಿಗಳು ಹೇಳಿದ್ದಾರೆ.

ಮೋದಿ ಬೆಂಬಲಿಸದವರನ್ನು ಪಾಕಿಸ್ತಾನಕ್ಕೆ ಕಳುಹಿಸುವುದಕ್ಕೆ ಇದೇನು ಮಕ್ಕಳ ಆಟವೇ? ಇದು ಗಿರಿರಾಜ್ ಸಿಂಗ್ ದೇಶವಲ್ಲ. ಈ ದೇಶ ಎಲ್ಲರಿಗೂ ಸೇರಿದ್ದು, ನಾವು ಇಲ್ಲೇ ಇದ್ದು, ಇಲ್ಲೇ ಸಾಯುತ್ತೇವೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಕೋಲಾಹಲ ಸೃಷ್ಟಿಸುವಂತಹ ಹೇಳಿಕೆ ನೀಡಿರುವ ಗಿರಿರಾಜ್ ಸಿಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೌಲ್ವಿಗಳು ಒತ್ತಾಯಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮೋದಿಯನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸದವರಿಗೆ ಭಾರತದಲ್ಲಿ ಜಾಗವಿಲ್ಲ. ಅಂತಹವರಿಗೆ ಪಾಕಿಸ್ತಾನದಲ್ಲಿ ಮಾತ್ರ ಜಾಗವಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಮುಂದೆಯೇ ಇಂತಹ ಹೇಳಿಕೆ ನೀಡಿದ್ದರು.

ಈ ಹಿನ್ನಲೆಯಲ್ಲಿ ನಿನ್ನೆ ಗಿರಿರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement