ತೃತೀಯ ರಂಗದೊಡನೆ ಕೈ ಜೋಡಿಸುವ ಬಗ್ಗೆ ಯೋಚಿಸಿಲ್ಲ: ಶರದ್ ಪವಾರ್
ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಡುವೆ...
ಮುಂಬೈ: ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹಗಳ ನಡುವೆಯೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸಾರ್ವತ್ರಿಕ ಚುನಾವಣೆಯಲ್ಲಿ ಯುಪಿಎ ಒಕ್ಕೂಟ ಬಹುಮತಗಳಿಸಲು ಅಸಮರ್ಥವಾದರೆ ತಾವು ತೃತೀಯ ರಂಗದೊಂದಿಗೆ ಕೈ ಜೋಡಿಸಲ್ಲ ಎಂದು ಹೇಳಿದ್ದಾರೆ.
ಆದಾಗ್ಯೂ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟಗಳು ಬಹುಮತ ಪಡೆದು ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ತಾವು ತೃತೀಯರಂಗದೊಂದಿಗೆ ಕೈ ಜೋಡಿಸುವ ಬಗ್ಗೆ ಯೋಚಿಸಿಲ್ಲ ಎಂದು ಹೇಳಿದ್ದಾರೆ.
ಈ ಕ್ಷಣದ ವರೆಗೆ ತೃತೀಯರಂಗವೆಂಬುದೇ ಇಲ್ಲ. ಚುನಾವಣೆಯ ನಂತರ ಹೀಗೊಂದು ರಂಗ ಸೃಷ್ಟಿಯಾಗಬಹುದು ಎಂದು ಅವರು ಹೇಳಿದ್ದಾರೆ.