ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಕೆ
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಸಡಿಲಿಕೆಗೆ ಚುನಾವಣಾ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಸಡಿಲಿಕೆಗೆ ಚುನಾವಣಾ ಆಯೋಗ ಮಂಗಳವಾರ ಒಪ್ಪಿಗೆ ಸೂಚಿಸಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್‌ಕುಮಾರ್ ಝಾ ಅವರು, ನೀತಿ ಸಂಹಿತೆಯಲ್ಲಿನ ಕೆಲವು ಅಂಶಗಳನ್ನು ಸಡಿಲಿಸಲಾಗಿದ್ದು, ಇನ್ನುಮುಂದೆ ಸಚಿವರು ರಾಜ್ಯ ಪ್ರವಾಸ ಮಾಡಬಹುದು, ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ಕರೆಯಬಹುದು ಮತ್ತು ಜಾರಿಯಲ್ಲಿರುವ ಯೋಜನೆಗಳ ಬಗ್ಗೆ ತೀರ್ಮನ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಈ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಅನಿಲ್ ಕುಮಾರ್ ಝಾ ತಿಳಿಸಿದ್ದಾರೆ.