ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗಿರಿರಾಜ್ ಸಿಂಗ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಬಿಹಾರ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ವಿರುದ್ಧ ಜಾರ್ಖಂಡ್ ನ್ಯಾಯಾಲಯ..

Srinivasa Murthy VN
Updated On : 23 Apr 2014, 5:58 am

ಜಾರ್ಖಂಡ್: ಬಿಹಾರ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ವಿರುದ್ಧ ಜಾರ್ಖಂಡ್ ನ್ಯಾಯಾಲಯ ಬುಧವಾರ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದ ಗಿರಿರಾಜ್ ಸಿಂಗ್ ವಿರುದ್ಧ ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಜಾರ್ಖಂಡ್‌ನ ಉಪ ವಿಭಾಗೀಯ ಪೀಠದ ಮ್ಯಾಜಿಸ್ಟ್ರೇಟ್ ಅಮಿತ್ ಶೇಖರ್ ಅವರು ಗಿರಿರಾಜ್ ಸಿಂಗ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.

ಇದೇ ಏಪ್ರಿಲ್ 18ರಂದು ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗಿರಿರಾಜ್ ಸಿಂಗ್ ಅವರು, ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದ್ವೇಷಿಸುವವರು ಮತ್ತು ಟೀಕಿಸುವವರು ಭಾರತದಲ್ಲಿ ಇರಲು ಲಾಯಕ್ಕಲ್ಲ. ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಗಿರಿರಾಜ್ ಸಿಂಗ್ ಅವರ ಹೇಳಿಕೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಬಿಜೆಪಿ, ಗಿರಿರಾಜ್ ಅವರ ಹೇಳಿಕೆ ವೈಯುಕ್ತಿಕವಾಗಿದ್ದು ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಕೂಡ ಗಿರಿರಾಜ್ ಅವರ ಹೇಳಿಕೆಯನ್ನು ಖಂಡಿಸುತ್ತದೆ ಎಂದು ಹೇಳಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿರಾಜ್ ಸಿಂಗ್ ವಿರುದ್ಧ ಜಾರ್ಖಂಡ್‌ನ ಬೋಕಾರೋ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 ಎ(2 ವರ್ಗಗಳನ್ನು ಪರಸ್ಪರ ಎತ್ತಿಕಟ್ಟುವದು), 295 ಎ(ಧಾರ್ಮಿಕ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟು ಮಾಡುವಂತಹ ವರ್ತನೆ) ಮತ್ತು 298(ಕೀಳು ಮಟ್ಟದ ಪದ ಬಳಕೆಯಿಂದ ಒಂದು ಕೋಮನ್ನು ಹೀಗಳೆಯುವುದು)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಏಪ್ರಿಲ್ 21ರಂದು ಎಫ್‌ಐಆರ್ ದಾಖಲಿಸಿದ ಬೋಕಾರೋ ಪೊಲೀಸರು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಗಿರಿರಾಜ್ ಸಿಂಗ್ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement