ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ: ಮೋದಿ ವಿರುದ್ಧ 'ಕೈ' ದೂರು

ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ..

Srinivasa Murthy VN
Updated On : 24 Apr 2014, 4:49 am

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ವಾರಣಾಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸುವ ವೇಳೆ ಬೃಹತ್ ರ್ಯಾಲಿ ನಡೆಸಿದ್ದು, ಇದು ಎಲ್ಲ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಆದರೆ ಇಂದು ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಸುಮಾರು 117 ಸ್ಥಾನಗಳಿಗೆ 11 ರಾಜ್ಯಗಳಲ್ಲಿ 6ನೇ ಹಂತದ ಮತದಾನ ನಡೆಯುತ್ತಿದ್ದು, ನರೇಂದ್ರ ಮೋದಿ ಅವರ ರೋಡ್ ಶೋ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ನರೇಂದ್ರ ಮೋದಿ ಮತ್ತು ರೋಡ್ ಶೋದಲ್ಲಿ ಭಾಗವಹಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಆನಂದ್ ಶರ್ಮಾ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮತದಾನ ನಡೆಯುತ್ತಿರುವ ಈ ಸಂದರ್ಭದಲ್ಲಿ ರೋಡ್ ಶೋ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. 11 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಮೋದಿ ರೋಡ್ ಶೋವನ್ನು ಎಲ್ಲ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಇದರಿಂದ ಮತದಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬಗ್ಗೆ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಮೊದಲೇ ಎಚ್ಚರಿಕೆ ನೀಡಬೇಕಿತ್ತು. ಆದರೆ ಆಯೋಗ ಈವರೆಗೂ ಆ ಕೆಲಸ ಯಾಕೆ ಮಾಡಿಲ್ಲ ಎಂದು ನಮಗೆ ತಿಳಿಯುತ್ತಿಲ್ಲ. ರೋಡ್ ಶೋದಲ್ಲಿ ಪಾಲ್ಗೊಂಡಿರುವ ಬಿಜೆಪಿ ನಾಯಕರಿಗಾದರೂ ಈ ಬಗ್ಗೆ ಅರಿವಿರಬೇಕಿತ್ತು. ಹೀಗಾಗಿ ನರೇಂದ್ರ ಮೋದಿ ಅವರು ಸೇರಿದಂತೆ ರೋಡ್ ಶೋದಲ್ಲಿ ಪಾಲ್ಗೊಂಡಿರುವ ಎಲ್ಲ ಬಿಜೆಪಿ ನಾಯಕರ ವಿರುದ್ದ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಬೇಕು ಎಂದು ಶರ್ಮಾ ಒತ್ತಾಯಿಸಿದರು.

ಒಟ್ಟಾರೆ 6ನೇ ಹಂತದ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬೃಹತ್ ರೋಡ್ ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಕೆ ಮಾಡಿರುವುದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement