ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಹೋದರ ಬಿಜೆಪಿ ಸೇರ್ಪಡೆಗೆ ಪ್ರಧಾನಿ ಸಿಂಗ್ ವಿಷಾದ

ತಮ್ಮ ಮಲತಮ್ಮ ದಲ್ಜೀತ್ ಸಿಂಗ್ ಕೊಹ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ತಮಗೆ ಅಗಾಧ ನೋವು ತಂದಿದೆ ಎಂದು ಪ್ರಧಾನಿ...

Rashmi Kasaragodu
Updated On : 26 Apr 2014, 3:58 am

ನವದೆಹಲಿ: ತಮ್ಮ ಮಲತಮ್ಮ ದಲ್ಜೀತ್ ಸಿಂಗ್ ಕೊಹ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ತಮಗೆ ಅಗಾಧ ನೋವು ತಂದಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ನನ್ನ ಸಹೋದರನ ನಿರ್ಧಾರದಿಂದ ನನಗೆ ಬೇಸರವಾಗಿದೆ. ನನಗೆ ಏನು ಹೇಳಬೇಕೆಂದು ತಿಳಿಯುತ್ತಿಲ್ಲ, ಅವರೆಲ್ಲರೂ ಪ್ರಬುದ್ಧರು ಎಂದು ಪದ್ಮ ಪ್ರಶಸ್ತಿ ವಿತರಣೆಯ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ ಸಿಂಗ್ ಹೇಳಿದ್ದಾರೆ.

ಶುಕ್ರವಾರ ಅಮೃತಸರದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮೋದಿ ಉಪಸ್ಥಿತಿಯಲ್ಲಿ ಕೊಹ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ದೇಶದಲ್ಲಿ ಮೋದಿ ಅಲೆ ಇಲ್ಲ ಎಂದು ಪ್ರಧಾನಿ ಸಿಂಗ್ ಹೇಳಿದ ಬೆನ್ನಲ್ಲೇ ಅವರ ಸಹೋದರ ಬಿಜೆಪಿ ಸೇರ್ಪಡೆಯಾಗಿರುವುದು ಕಾಂಗ್ರೆಸ್‌ಗೆ ಟಾಂಗ್ ನೀಡಿದಂತಾಗಿದೆ.

ತಮ್ಮ ಸಹೋದರ ಬಿಜೆಪಿಗೆ ಸೇರ್ಪಡೆಯಾಗಿರುವುದಕ್ಕೆ ವಿಷಾದಿಸಿದ ಸಿಂಗ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮತ್ತೆ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement