ದೆಹಲಿಯಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಪತ್ತೆ
ರಾಜಧಾನಿ ನವದೆಹಲಿಯಲ್ಲಿ ಭಾರಿ ಪ್ರಮಾಣದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತರ ರಾಜ್ಯ ಡ್ರಗ್ಸ್ ಮಾಫಿಯಾದ ಐವರನ್ನು ಬಂಧಿಸಲಾಗಿದೆ.
ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಭಾರಿ ಪ್ರಮಾಣದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತರ ರಾಜ್ಯ ಡ್ರಗ್ಸ್ ಮಾಫಿಯಾದ ಐವರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ದೆಹಲಿಯ ನಾರ್ಕೋಟೆಕ್ ಸಿಬ್ಬಂಧಿ, ಬರೊಬ್ಬರಿ 18 ಕೆಜೆ ಹೆರಾಯಿನ್ ಮತ್ತು 15 ಕೆಜಿ ಇತರೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಸ್ತುತ ವಶಪಡಿಸಿಕೊಳ್ಳಲಾಗಿರುವ ಮಾದಕ ವಸ್ತುವಿನ ಮೌಲ್ಯ ಸುಮಾರು 65 ಕೋಟಿ ಎಂದು ಅಂದಾಜಿಸಲಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಹೆರಾಯಿನ್‌ಗೆ 60 ರಿಂದ 1ಕೋಟಿ ಬೆಲೆ ಇದೆ. ಪ್ರಸ್ತುತ ಬಂಧಿಸಲಾಗಿರುವ ಐವರಿಂದ 2 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆಗಾಗಿ ಎಲ್ಲ ಐವರನ್ನು ವಿಶೇಷ ತನಿಖಾದಳಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.