ನ್ಯಾ.ಆರ್.ಎಂ.ಲೋಧಾ ಅಧಿಕಾರ ಸ್ವೀಕಾರ
ಮುಖ್ಯ ನ್ಯಾಯಮೂರ್ತಿಯಾಗಿ ರಾಜೇಂದ್ರ ಮಾಲ್ ಲೋಧಾ ಅವರು ಭಾನುವಾರ ಅಧಿಕಾರ ಸ್ವೀಕರಿಸಿದ್ದಾರೆ.
ನವದೆಹಲಿ: ಮುಖ್ಯ ನ್ಯಾಯಮೂರ್ತಿಯಾಗಿ ರಾಜೇಂದ್ರ ಮಾಲ್ ಲೋಧಾ ಅವರು ಭಾನುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಭಾರತ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರ ನಿವೃತ್ತಿಯಾದ ಹಿನ್ನಲೆಯಲ್ಲಿ ನ್ಯಾಯಾಂಗದ ಮುಖ್ಯಸ್ಥರಾಗಿದ್ದ ಲೋಧಾ ಅವರು ಇಂದು ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಆರ್.ಎಂ.ಲೋಧಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಧಾ ಅವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.
ರಾಷ್ಟ್ರಪತಿ ಭವನದಲ್ಲಿ ಸರಳ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಕೇಂದ್ರ ಸಚಿವರು ಮತ್ತು ನಿವೃತ್ತ ನ್ಯಾಯಮೂರ್ತಿ ಪಿ.ಸದಾಶಿವಂ ಅವರು ಸೇರಿದಂತೆ ಹಲವರು ಹಾಜರಿದ್ದರು. ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ಯಾವುದೇ ನಾಯಕರು ಹಾಜರಿರಲಿಲ್ಲ.
64 ವರ್ಷದ ಲೋಧಾ ಅವರು, ದೇವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ. ಮುಂಬರುವ ಸೆಪ್ಟೆಂಬರ್ 27ರಂದು ಲೋಧಾ ಅವರು ನಿವೃತ್ತರಾಗಲಿದ್ದು, 5 ತಿಂಗಳುಗಳ ಕಾಲ ಅವರು ಭಾರತ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.