ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಜಾಮೀನು ಅರ್ಜಿ ವಜಾ

ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ...

Vishwanath S
Updated On : 28 Apr 2014, 8:01 am

ಬೊಕಾರೋ(ಜಾರ್ಖಂಡ್): ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೋಮವಾರ ಸ್ಥಳೀಯ ನ್ಯಾಯಾಲಯ ವಜಾ ಮಾಡಿದೆ.

ತಮ್ಮ ವಿರುದ್ಧ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಗಿರಿರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಬಿಪಿನ್ ಬಿಹಾರಿ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ನೆಲೆಯಿಲ್ಲ ಅವರೆಲ್ಲ ಪಾಕಿಸ್ತಾನಕ್ಕೆ ತೆರಳಲಿ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಏಪ್ರಿಲ್ 23ರಂದು ಉಪ ವಿಭಾಗಿಯ ನ್ಯಾಯಾಲಯದ ನ್ಯಾಯಾಧೀಶರಾದ ಅಮಿತ್ ಶೇಕರ್ ಗಿರಿರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದರು.

ಏಪ್ರಿಲ್ ೧೮ ರಂದು ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಗಿರಿರಾಜ್ ಸಿಂಗ್, ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೋದಿಯನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸದವರಿಗೆ ಭಾರತದಲ್ಲಿ ಜಾಗವಿಲ್ಲ. ಅಂತಹವರಿಗೆ ಪಾಕಿಸ್ತಾನದಲ್ಲಿ ಮಾತ್ರ ಜಾಗವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement