ಕಾಂಗ್ರೆಸ್, ಮಿತ್ರಪಕ್ಷಗಳಿಗೆ ಸ್ಪಷ್ಟ ಬಹುಮತ: ಪಟೇಲ್
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ...
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಮೇ 16ರಂದು ಪ್ರಕಟಗೊಳ್ಳಲಿದ್ದು, ಇದರಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಸಿಗಲಿದ್ದು, ಮೂರನೇ ಬಾರಿಗೂ ಕಾಂಗ್ರೆಸ್ ಬಿಜೆಪಿ ವಿರುದ್ಧ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪರಮಾಪ್ತ ಪಟೇಲ್ ತಿಳಿಸಿದ್ದಾರೆ.
ದೇಶಾದ್ಯಂತ ಕಾಂಗ್ರೆಸ್ ಘಟಕಗಳ ಮೂಲಕ ನಮಗೆ ಮಾಹಿತಿ ಸಿಗುತ್ತಿದ್ದು, ಜನರು ಬಿಜೆಪಿಯ ವಂಚನೆ ಆಟವನ್ನು ತಿರಸ್ಕರಿಸಲಿದ್ದಾರೆ ಎಂದರು.
ಏತನ್ಮಧ್ಯೆ, ''ಕಾಂಗ್ರೆಸ್ ಅಧಿಕಾರಕ್ಕಾಗಿ ಹಪಹಪಿಸುವುದಿಲ್ಲ. ಕೋಮುಶಕ್ತಿಗಳಿಗೆ (ಬಿಜೆಪಿ) ಅಧಿಕಾರ ತಪ್ಪಿಸಲು ಸಾಧ್ಯವಿರುವ ಎಲ್ಲ ಆಯ್ಕೆಗಳನ್ನೂ ಪರಿಶೀಲಿಸಲಾಗುವುದು. ಪಕ್ಷದ ಸಹೋದ್ಯೋಗಿಗಳ ಜತೆ ಚರ್ಚಿಸಿದ ಬಳಿಕ ಕಾಂಗ್ರೆಸ್ ಅಧ್ಯಕ್ಷರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ'' ಎಂದು ಪಟೇಲ್ ಹೇಳಿದ್ದಾರೆ.
ಎನ್‌ಡಿಎ ಜತೆ ಗುರುತಿಸಿಕೊಳ್ಳದ ಬಿಜೆಪಿಯೇತರ 'ಜಾತ್ಯತೀತ' ಮೈತ್ರಿಕೂಟದ ಜತೆ ಕೈಜೋಡಿಸಲೂ ಕಾಂಗ್ರೆಸ್ ಹಿಂಜರಿಯುವುದಿಲ್ಲ ಎಂಬುದು ಅವರ ಮಾತಿನ ಸ್ಪಷ್ಟ ಇಂಗಿತವಾಗಿತ್ತು.