ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾನು ಮೋದಿಯಂತೆ ಹೇಡಿಯಲ್ಲ: ದಿಗ್ವಿಜಯ್ ಸಿಂಗ್

ನಾನು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಂತೆ ಹೆಂಡತಿಯನ್ನು ಬಚ್ಚಿಡುವ ಹೇಡಿಯಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

Srinivasa Murthy VN
Updated On : 1 May 2014, 4:39 am

ನವದೆಹಲಿ: ನಾನು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಂತೆ ಹೆಂಡತಿಯನ್ನು ಬಚ್ಚಿಡುವ ಹೇಡಿಯಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ತಮ್ಮ ಮತ್ತು ಟಿ.ವಿ ನಿರೂಪಕಿ ಅಮೃತಾರಾಯ್ ಅವರೊಂದಿಗಿನ ಸಂಬಂಧದ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, 'ತಾವು ತಮ್ಮ ನಿರ್ಣಯಕ್ಕೆ ಬದ್ಧರಾಗಿದ್ದು, ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಾನೇನು ಹೆಂಡತಿಯನ್ನು ಬಚ್ಚಿಡುವ ಹೇಡಿಯಲ್ಲ' ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ನಿರೂಪಕಿ ಅಮೃತಾರಾಯ್ ಮತ್ತು ಆಕೆಯ ಪತಿಯ ವಿವಾಹ ವಿಚ್ಚೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿದ್ದು, ನಂತರ ಆಕೆಯನ್ನು ನಾನು ವಿವಾಹವಾಗುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಈ ಕುರಿತು ಈಗಾಗಲೇ ತಮ್ಮ ಟ್ವಿಟರ್ ಖಾತೆಯಲ್ಲಿ ದಿಗ್ವಿಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಿರೂಪಕಿ ಅಮೃತಾ ರಾಯ್ ಅವರು ಕೂಡ ಇದೇ ವಿಚಾರವನ್ನು ತಿಳಿಸಿದ್ದು, ವಿಚ್ಛೇದನದ ನಂತರ ದಿಗ್ವಿಜಯ್ ಸಿಂಗ್ ಅವರನ್ನು ವಿವಾಹವಾಗುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ತಮ್ಮ ಖಾಸಗಿ ಜೀವನದ ಕುರಿತು ಸುದ್ದಿಯಾಗುತ್ತಿರುವುದಕ್ಕೆ ಆಕ್ಷೇಪವೆತ್ತಿರುವ ದಿಗ್ವಿಜಯ್ ಸಿಂಗ್ ಅವರು, ತಮ್ಮ ಖಾಸಗಿ ಜೀವನದ ಕುರಿತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವುದನ್ನು ಖಂಡಿಸುತ್ತೇನೆ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

ಒಟ್ಟಾರೆ ದಿಗ್ವಿಜಯ್ ಸಿಂಗ್ ಮತ್ತು ಅಮೃತಾರಾಯ್ ಅವರ ಪ್ರಕರಣದಿಂದಾಗಿ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದೆ. ಈ ಹಿಂದೆ ನರೇಂದ್ರ ಮೋದಿ ಅವರು ಹೆಂಡತಿಯನ್ನು ಬಚ್ಚಿಟ್ಟಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದ, ದಿಗ್ವಿಜಯ್ ಸಿಂಗ್ ಅವರು ಇದೀಗ ತಮ್ಮ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮಾಧ್ಯಮಗಳು ವಿರುದ್ಧ ಹರಿಹಾಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement