ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೇನಿಗೆ ಚುನಾವಣಾ ಆಯೋಗದ ಖಡಕ್ ಎಚ್ಚರಿಕೆ

ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಬೇನಿ ಪ್ರಸಾದ್ ವರ್ಮಾ ಅವರಿಗೆ..

Srinivasa Murthy VN
Updated On : 1 May 2014, 6:49 am

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮಾ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ನರೇಂದ್ರ ಮೋದಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬೇನಿ ಪ್ರಸಾದ್ ವರ್ಮಾ ಅವರು ಇಂತಹ ಮತ್ತೊಂದು ಹೇಳಿಕೆ ನೀಡಿದರೆ ಅವರನ್ನು ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ತಡೆ ನೀಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದ ಪ್ರಚಾರ ಕಾಯಕ್ರಮದಲ್ಲಿ ಪಾಲ್ಗೊಂಡಿದ್ದ ಬೇನಿ ಪ್ರಸಾದ್ ವರ್ಮಾ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು 'ಕೊಲೆಗಾರ' ಎನ್ನುವ ರೀತಿಯಲ್ಲಿ ಮಾತನಾಡಿದ್ದರು. ಬೇನಿ ಹೇಳಿಕೆ ಬಿಜೆಪಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿತ್ತು.

ಇತ್ತೀಚೆಗೆ 'ಹರಕು ಬಾಯಿ ರಾಜಕಾರಣಿ'ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗ ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳ ಬಹಿರಂಗ ಸಭೆಗಳಿಗೆ ತಡೆ ನೀಡಿದೆ. ಈ ಹಿಂದೆ ಸಮಾಜವಾದಿ ಪಕ್ಷದ ಅಜಂಖಾನ್, ಬಿಜೆಪಿ ಪಕ್ಷದ ಅಮಿತ್ ಶಾ, ಗಿರಿರಾಜ್ ಸಿಂಗ್ ಮತ್ತು ಯೋಗಗುರು ಬಾಬಾ ರಾಮದೇವ್ ಅವರ ಬಹಿರಂಗ ಸಭೆಗಳಿಗೆ ಆಯೋಗ ಕಡಿವಾಣ ಹಾಕಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement