ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ನೇಪಾಳಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನೇಪಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ...

Mainashree
Updated On : 2 Aug 2014, 6:12 am

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಭಾನುವಾರ ನೇಪಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಭಯ ದೇಶಗಳ ಬಾಂಧವ್ಯ ವೃದ್ಧಿಗಾಗಿ ಪ್ರಧಾನಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಆರ್ಥಿಕ ಅಭಿವೃದ್ಧಿ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನೇಪಾಳಕ್ಕೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಮೋದಿ, ವಿದ್ಯುತ್ ಸೇರಿದಂತೆ ಇತರೆ ಒಲಯಗಳಲ್ಲಿ ಕೆಲವು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

17 ವರ್ಷಗಳ ನಂತರ ನೇಪಾಳಕ್ಕೆ ಭಾರತದ ಪ್ರಧಾನಿ ಭೇಟಿ ನೀಡುತ್ತಿರುವುದು ವಿಶೇಷ. ನೇಪಾಳದ ಪಶುಪತಿನಾಥ್ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಮೋದಿ, ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ ನೀಡಿದ ಒಂದು ವಾರದ ಬಳಿಕ ಮೋದಿ ಭೇಟಿ ನೀಡುತ್ತಿದ್ದು, ಉಭಯ ದೇಶಗಳ ನಡುವೆ ಸಂಸ್ಕೃತಿ ಮತ್ತು ವಿದ್ಯುತ್ ಕುರಿತು ಒಪ್ಪಂದವಾಗಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement