ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪುಣೆಯಲ್ಲಿ ಭೂಕುಸಿತ: ಸಾವಿನ ಸಂಖ್ಯೆ 75ಕ್ಕೆ ಏರಿಕೆ

ಭಾರಿ ಮಳೆಯಿಂದಾಗಿ ಮಾಲಿನ ಗ್ರಾಮದಲ್ಲಿ ಬುಧವಾರ ಸಂಭವಿಸಿದ ಗುಡ್ಡ ಕುಸಿತದಲ್ಲಿ...

Mainashree
Updated On : 2 Aug 2014, 3:18 am

ಪುಣೆ: ಭಾರಿ ಮಳೆಯಿಂದಾಗಿ ಮಾಲಿನ ಗ್ರಾಮದಲ್ಲಿ ಬುಧವಾರ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 75ಕ್ಕೇರಿದೆ.

ಪ್ರತಿಕೂಲ ಹವಾಮಾನದ ನಡುವೆಯೂ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡವರ ರಕ್ಷಣಾ ಕಾರ್ಯ ನಾಲ್ಕನೇ ದಿನವಾದ ಶನಿವಾರವು ಮುಂದುವರೆದಿದ್ದು, 75 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಇನ್ನೂ 100ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದು, ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಇಲ್ಲಿಯವರೆಗೆ 28 ಪುರಷರು, 37 ಮಹಿಳೆಯರು ಮತ್ತು 10 ಮಕ್ಕಳ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮಹಾರಾಷ್ಟ್ರ ಸರ್ಕಾರ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement