ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಮನ್‌ವೆಲ್ತ್ ಗೇಮ್ಸ್‌ಗೆ ತೆರಳಿದ್ದ ಭಾರತೀಯ ಅಧಿಕಾರಿಗಳ ಬಂಧನ

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರಳಿದ್ದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಬಂಧಿಸಲಾಗಿದೆ...

Mainashree
Updated On : 4 Aug 2014, 11:32 am

ಗ್ಲಾಸ್ಗೊ: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರಳಿದ್ದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಬಂಧಿಸಲಾಗಿದೆ.

ಐಓಎ ಜನರಲ್ ಸೆಕ್ರೆಟರಿ ರಾಜೀವ್ ಮೆಹ್ತಾ ಮತ್ತು  ರೆಸ್ಟ್ಲಿಂಗ್ ರೆಫ್ರಿ ವಿರೇಂದರ್ ಮಲಿಕ್ ಅವರನ್ನು ಗ್ಲಾಸ್ಗೋ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಇದರಿಂದ ಭಾರತಕ್ಕೆ ತೀವ್ರ ಮುಜುಗರ ಉಂಟಾಗಿದೆ.

ವೀರೇಂದರ್ ಮಲ್ಲಿಕ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಹಾಗೂ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಐಓಎ ಜನರಲ್ ಸೆಕ್ರೆಟರಿ ರಾಜೀವ್ ಮೆಹ್ತಾರನ್ನು ಬಂಧನ ಮಾಡಲಾಗಿದೆ. ಪೊಲೀಸರು ಸೋಮವಾರ ಗ್ಲಾಸ್ಗೊ ನ್ಯಾಯಾಲಯದ ಮುಂದೆ ಅಧಿಕಾರಿಗಳನ್ನು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement