ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚೀನಾದಲ್ಲಿ ಪ್ರಬಲ ಭೂಕಂಪ: 367 ಸಾವು

ನಿನ್ನೆ ಚೀನಾದಲ್ಲಿ ಸಂಭವಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ...

Mainashree
Updated On : 4 Aug 2014, 6:04 am

ಬೀಜಿಂಗ್: ನಿನ್ನೆ ಚೀನಾದಲ್ಲಿ ಸಂಭವಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 367ಕ್ಕೆ ಏರಿಕೆಯಾಗಿದೆ.

ಚೀನಾದ ನೈರುತ್ಯ ಭಾಗದಲ್ಲಿ ಪ್ರಬಲ ಭೂಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.1 ರಷ್ಟು ದಾಖಲಾಗಿದೆ.

ಭಾರಿ ಭೂಕಂಪನದ ಪರಿಣಾಮ 367 ಜನರು ಸಾವನ್ನಪ್ಪಿದ್ದು, 1,300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

12,000 ಮನೆಗಳು ನೆಲಸಮವಾಗಿದ್ದು, ಸುಮಾರು 30ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಅನೇಕರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement