9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕ ಶಿಕ್ಷಕನ ಬಂಧನ
9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ...
ಬೆಂಗಳೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಮಂಗಳವಾರ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಹೊರವಲಯದ ಉಳ್ಳಾಲ ಉಪನಗರದಲ್ಲಿರುವ ಮಾರುತಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಮೌಳಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕಾಮುಕ ಶಿಕ್ಷಕ ಬಾಲಕಿಯನ್ನು ವಿವಸ್ತ್ರಗೊಳಿಸಿ ವಿಕೃತ ಆನಂದ ಪಡೆಯುತ್ತಿದ್ದ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.