ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೆಹಲಿ ಸರ್ಕಾರ ರಚನೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ಸರ್ಕಾರ ರಚನೆ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ....

Mainashree
Updated On : 5 Aug 2014, 4:49 am

ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚನೆ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಮನೆಯಲ್ಲಿ ಸೋಮಾರಿಗಳಾಗಬೇಕೇ? ಎಂದು ಪ್ರಶ್ನಿಸಿದೆ.

ಸರ್ಕಾರ ರಚನೆಯಾಗದೇ ಅತಂತ್ರ ಸ್ಥಿತಿಯಲ್ಲಿರುವ ದೆಹಲಿ ವಿಧಾನಸಭೆ ವಿವಾದವನ್ನು ಬೇಗ ಇತ್ಯರ್ಥಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಆದಷ್ಟು ಬೇಗ ಕೇಂದ್ರ ಸರ್ಕಾರ ದೆಹಲಿ ಸರ್ಕಾರ ರಚನೆ ಬಗ್ಗೆ ಕ್ರಮಕೈಗೊಳ್ಳಬೇಕು. ದಕ್ಷವಾದ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜನರು ಆಯ್ಕೆ ಮಾಡುವಂತಹ ಶಾಸಕರು ಮನೆಯಲ್ಲೇ ಕುಳಿತು ಸೋಮಾರಿಗಳಾಗಬೇಕೇ? ಎಷ್ಟು ದಿನದವರೆಗೆ ಜನತೆ ಸರ್ಕಾರವಿಲ್ಲದ ಪರೆದಾಡಬೇಕು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಪ್ರಸ್ತುತ ದೆಹಲಿ ವಿಧಾನಸಭೆ ಅಮಾನತಿನಲ್ಲಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ಕೇಂದ್ರ ಸರ್ಕಾರ ಮೌನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement