ನಿತ್ಯಾನಂದ ಪುರಷತ್ವ ಪರೀಕ್ಷೆ ಮುಂದೂಡಿಕೆ
ರಾಸಲೀಲೆ ಹಾಗೂ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ನಿತ್ಯಾನಂದನಿಗೆ...
ನವದೆಹಲಿ: ರಾಸಲೀಲೆ ಹಾಗೂ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ನಿತ್ಯಾನಂದನಿಗೆ ನಡೆಸಬೇಕಿದ್ದ ಪುರುಷತ್ವ ಪರೀಕ್ಷೆಯನ್ನು ಮುಂದೂಡಲಾಗಿದೆ.
ಆಗಸ್ಟ್ 6ರಂದು ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ನಾಳೆ ನಡೆಯಬೇಕಿದ್ದ ಪುರುಷತ್ವ ಪರೀಕ್ಷೆಗೆ ತಡೆಯಾಕಿದೆ.
ಆದರೆ ಆಗಸ್ಟ್ 18ರಂದು ರಾಮನಗರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ನಿತ್ಯಾನಂದ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಆಗಸ್ಟ್ 18ರಂದು ನಿತ್ಯಾನಂದ ಅವರು ರಾಮನಗರ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದು ನಿತ್ಯಾನಂದ ಪರ ವಕೀಲರು ತಿಳಿಸಿದ್ದಾರೆ.
2011ರಿಂದಲೂ ವಿಚಾರಣೆ ಹಂತದಲ್ಲಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಆರೋಪಿಗಳು ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಅಡ್ಡಿಪಡಿಸುವುದು ಸರಿಯಲ್ಲ. ಪ್ರಕರಣದ ವಿಚಾರಣೆ ಪ್ರಗತಿಯಾಗಬೇಕು ಎಂದು ಹೇಳಿದೆ.
ಪ್ರಕರಣ ಸಂಬಂಧ ರಾಜ್ಯ ಸರ್ಕಾರ 1 ವಾರದೊಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಆದೇಶಿಸಿದ್ದು, ಒಂದು ವಾರದ ನಂತರ ನಿತ್ಯಾನಂದನ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.