ಬೆಂಗಳೂರಿನಲ್ಲಿ ಕೊಳವೆ ಬಾವಿ ಮುಚ್ಚಲು 1 ತಿಂಗಳ ಗಡವು
ಮಕ್ಕಳು ಕೊಳವೆ ಬಾವಿಗೆ ಬೀಳುತ್ತಿರುವ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ...
ಬೆಂಗಳೂರು: ಮಕ್ಕಳು ಕೊಳವೆ ಬಾವಿಗೆ ಬೀಳುತ್ತಿರುವ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಕೊಳವೆ ಬಾವಿಯನ್ನು ಮುಚ್ಚಿಸುವುದಕ್ಕೆ ಒಂದು ತಿಂಗಳ ಗಡುವು ನೀಡಿದೆ.
ಬೆಂಗಳೂರಿನ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಒಂದು ತಿಂಗಳೊಳಗೆ ಕೊಳವೆ ಬಾವಿ ಮುಚ್ಚಿಸಬೇಕು, ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 110 ಗ್ರಾಮಗಳಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 2500 ನಿರುಪಯುಕ್ತ ಬೋರ್ವೆಲ್ಗಳಿವೆ. 1000ಕ್ಕೂ ಹೆಚ್ಚು ಕೊಳವೆಬಾವಿಗಳು ತೆರೆದ ಸ್ಥಿತಿಯಲ್ಲಿವೆ ಎಂದು ಬಿಬಿಎಂಪಿ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.
ಆದ್ದರಿಂದ ಒಂದು ತಿಂಗಳೊಳಗೆ ನಗರದಲ್ಲಿರುವ ಎಲ್ಲಾ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಬೆಂಗಳೂರು ನಗರ ಡಿಸಿಗೆ ಆದೇಶಿಸಿದ್ದು, ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.